ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.
TSK
TSK · 1 ಪೂರ್ವಕಾಲವೃತ್ತಾ 28:11
Treasury of Scripture Knowledge references in ಕನ್ನಡ IRV.
ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು.
¶ ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.
ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.
ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.
¶ ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.
ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು.
ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು.
ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.
¶ ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು. ಅದು ಒಂದು ಕೋಲು ಉದ್ದವಾಗಿತ್ತು.
¶ ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳೆಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು.
¶ ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು.
¶ ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.
ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.