TSK

TSK · 1 ಪೂರ್ವಕಾಲವೃತ್ತಾ 28:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ” ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು.

ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.

ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ.

¶ ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ.

¶ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.

¶ ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.

ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.

ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

“ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ,

ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.

ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.

‹ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.›

ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.