TSK

TSK · 1 ಪೂರ್ವಕಾಲವೃತ್ತಾ 28:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.

“ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ,

¶ ಇಸ್ರಾಯೇಲ್ ದೇವರಾದ ಯೆಹೋವನು ಸೊಲೊಮೋನನಿಗೆ ಎರಡು ಸಾರಿ ಕಾಣಿಸಿಕೊಂಡು,

ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.

ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”