TSK

TSK · 1 ಪೂರ್ವಕಾಲವೃತ್ತಾ 29:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.

ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು” ಎಂದನು.

ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.

¶ ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.

¶ ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.

ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.

ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.