TSK

TSK · 1 ಪೂರ್ವಕಾಲವೃತ್ತಾ 4:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.

ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.

ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು.

ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.

ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇದೆ.

ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.