ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.
TSK
TSK · 1 ಪೂರ್ವಕಾಲವೃತ್ತಾ 5:20
Treasury of Scripture Knowledge references in ಕನ್ನಡ IRV.
¶ ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.
ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.
ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು.
ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.
¶ ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.
ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.
ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.
ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.
ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
¶ ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.