TSK

TSK · 1 ಪೂರ್ವಕಾಲವೃತ್ತಾ 5:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.

¶ ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.

ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.

ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.