TSK

TSK · 1 ಪೂರ್ವಕಾಲವೃತ್ತಾ 6:39

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.

ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;

¶ ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.

¶ ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.

ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.

ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.

ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.

ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.

ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.

ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.

ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.

ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.