TSK

TSK · 1 ಪೂರ್ವಕಾಲವೃತ್ತಾ 7:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ

¶ ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.

“ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.

ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.

¶ ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.

¶ ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.