TSK

TSK · 1 ಪೂರ್ವಕಾಲವೃತ್ತಾ 9:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ.

ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.

¶ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,

ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು

¶ ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.

ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.

ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು.

¶ ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.