TSK

TSK · 1 ಕೊರಿಂಥದವರಿಗೆ 4:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.

ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.

¶ ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,

ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು.

ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.

ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.