TSK

TSK · 1 ಯೋಹಾನನು 1:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?.”

ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.

¶ ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.

ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.