TSK

TSK · 1 ಯೋಹಾನನು 1:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.

ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.

ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”

‹ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.›

‹ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ›‹ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.›

¶ ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.

¶ “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;

ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.

¶ ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.

ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.

¶ ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,

ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.

ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.

¶ ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.

¶ ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,

¶ ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.

ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.