ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
TSK
TSK · 1 ಯೋಹಾನನು 2:12
Treasury of Scripture Knowledge references in ಕನ್ನಡ IRV.
ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
‹ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ”› ಅಂದನು.
ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
¶ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
¶ ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.