ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
TSK
TSK · 1 ಯೋಹಾನನು 2:17
Treasury of Scripture Knowledge references in ಕನ್ನಡ IRV.
ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.
ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.
¶ ‹“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.›
‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.›
‹ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು›‹ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು”› ಎಂದು ಹೇಳಿದನು.
‹ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.›
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
¶ ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.
ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.