ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.
TSK
TSK · 1 ಯೋಹಾನನು 2:4
Treasury of Scripture Knowledge references in ಕನ್ನಡ IRV.
ತೀತನಿಗೆ 1:16
TSK
1 ಯೋಹಾನನು 1:6
TSK
ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.
1 ಯೋಹಾನನು 1:10
TSK
ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.
1 ಯೋಹಾನನು 4:20
TSK
ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?