ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.
TSK
TSK · 1 ಯೋಹಾನನು 2:5
Treasury of Scripture Knowledge references in ಕನ್ನಡ IRV.
ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ.
ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.
ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
ಅದಕ್ಕೆ ಯೇಸು, ‹“ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು”› ಅಂದನು.
‹ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”› ಎಂದು ಹೇಳಿದನು.
‹ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.›
ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.
ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.