TSK

TSK · 1 ಯೋಹಾನನು 3:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.

ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.

ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.

ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.

ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?