TSK

TSK · 1 ಯೋಹಾನನು 4:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ‹“‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.›

ಅದಕ್ಕೆ ಯೇಸು, ‹“‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು›‹ಒಬ್ಬನೇ ದೇವರು.›

‹ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.›

¶ ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.

ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.

¶ ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.

ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.