ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.
TSK
TSK · 1 ಯೋಹಾನನು 4:5
Treasury of Scripture Knowledge references in ಕನ್ನಡ IRV.
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.
ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
ಆತನು ಅವರಿಗೆ, ‹“ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ.›
‹ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.›
ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.