‹ಮತ್ತು ಅನೀತಿವಂತರಾದ ಇವರು›‹ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.›
TSK
TSK · 1 ಯೋಹಾನನು 5:11
Treasury of Scripture Knowledge references in ಕನ್ನಡ IRV.
¶ ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,
‹ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.›
ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು.
‹ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.›
‹ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು”› ಎಂದು ಹೇಳಿದನು.
ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›
‹ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ”› ಎಂದನು.
‹ನೀನು ಯಾರಾರನ್ನು ಕೊಟ್ಟಿದ್ದೀಯೋ›‹ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.›
ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.
ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.
ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.
ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.
ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.
ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.
ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.