1 ಅರಸುಗಳು 12:30
TSK
ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.
TSK
Treasury of Scripture Knowledge references in ಕನ್ನಡ IRV.
ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.
ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.
ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.
ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು.