TSK

TSK · 1 ಅರಸುಗಳು 21:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.

¶ ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:

¶ ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.

‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’

ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು.

ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?

¶ ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.

ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, ‹“ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.›

ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.