TSK

TSK · 1 ಪೇತ್ರನು 1:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.

ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.

ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.

ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.

ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.

¶ ‹“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.›

ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.

‹ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ”› ಎಂದು ಹೇಳಿದನು.

‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.

ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.

ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.

ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.

ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.

¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.

ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.

ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ?

¶ ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.

ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.

¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.