¶ ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.
TSK
TSK · 1 ಪೇತ್ರನು 2:17
Treasury of Scripture Knowledge references in ಕನ್ನಡ IRV.
¶ ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.
¶ “‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.
¶ ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.
ಕೂಡಲೆ ಯೆಹೂದಕ್ಕೂ, ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು “ಒಗ್ಗಟ್ಟು” ಎಂಬ ನನ್ನ ಎರಡನೆಯ ಕೋಲನ್ನು ಮುರಿದುಬಿಟ್ಟೆನು.
‹ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು”› ಎಂದನು.
ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
¶ ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.
¶ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.