¶ ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
TSK
TSK · 1 ಪೇತ್ರನು 3:5
Treasury of Scripture Knowledge references in ಕನ್ನಡ IRV.
ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.
ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.