TSK

TSK · 1 ಸಮುವೇಲನು 1:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.

ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.

¶ ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.

¶ ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.

ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.

ಅದಕ್ಕೆ ಯೇಸು ಅವರಿಗೆ, ‹“ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.›

¶ ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,