TSK

TSK · 1 ಸಮುವೇಲನು 13:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.

ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.

¶ ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರು ನೂರು ಪುರುಷರಿದ್ದರು. ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.

ಅದರಲ್ಲಿ ಒಂದು ಬಂಡೆ ಉತ್ತರದಿಕ್ಕಿಗೆ ಎತ್ತರವಾಗಿ ಮಿಕ್ಮಾಷಿಗೂ, ಮತ್ತೊಂದು ದಕ್ಷಿಣದಿಕ್ಕಿನ ಗೆಬಕ್ಕೆ ಎದುರಾಗಿದ್ದವು.

ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.