TSK

TSK · 1 ಸಮುವೇಲನು 13:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.

ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು.

ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.

¶ ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.

ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.

¶ ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.

ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.

ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.