TSK

TSK · 1 ಸಮುವೇಲನು 13:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,

ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.

ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು.

¶ ಫಿಲಿಷ್ಟಿಯರು ಯುದ್ಧ ಮಾಡುವುದಕ್ಕೋಸ್ಕರ ಯೆಹೂದ ದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮಿನಲ್ಲಿ ಪಾಳೆಯಮಾಡಿಕೊಂಡರು.

ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.

ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.

ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.