¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
TSK
TSK · 1 ಸಮುವೇಲನು 13:7
Treasury of Scripture Knowledge references in ಕನ್ನಡ IRV.
¶ ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.
ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.
¶ ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:
¶ ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
ಸೌಲನೂ ಎಲ್ಲಾ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಎದೆಗುಂದಿದವರಾಗಿ ಬಹಳ ಭಯಪಟ್ಟರು.
ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;