TSK

TSK · 1 ಸಮುವೇಲನು 2:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.

¶ ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.

¶ ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.

ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.

ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.

¶ ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.