TSK

TSK · 1 ಸಮುವೇಲನು 2:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.

ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.

¶ ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.

ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.

ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.

¶ “‘ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು.