ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.
TSK
TSK · 1 ಸಮುವೇಲನು 2:35
Treasury of Scripture Knowledge references in ಕನ್ನಡ IRV.
ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.
ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.
ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ ‘ನಾನು ನಿನಗೋಸ್ಕರ ಮನೆ ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.
ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ.
ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು. ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು.
¶ ಜನರು ದಾವೀದನ ಮಗನಾದ ಸೊಲೊಮೋನನನ್ನು ಪುನಃ ಅರಸನನ್ನಾಗಿ ಆರಿಸಿಕೊಂಡು ಅವನನ್ನು ರಾಜನನ್ನಾಗಿಸಿವುದಕ್ಕೂ, ಚಾದೋಕನನ್ನು ಯಾಜಕನಾಗುವುದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.
ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ಯಜ್ಞವೇದಿಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.
¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.