TSK

TSK · 1 ಸಮುವೇಲನು 2:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.

ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.

ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.

ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.

ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.

ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.

“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.

‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.›

ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.