ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.
TSK
TSK · 1 ಸಮುವೇಲನು 20:13
Treasury of Scripture Knowledge references in ಕನ್ನಡ IRV.
ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.
¶ ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.
ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,
¶ ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.
ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.
ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.