TSK

TSK · 1 ಸಮುವೇಲನು 23:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ” ಅಂದನು.

¶ ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.

ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.

ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.

ದಾವೀದನು ದೇವರಾದ ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು” ಎಂದು ಉತ್ತರ ಕೊಟ್ಟನು.