TSK

TSK · 1 ಸಮುವೇಲನು 6:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.

ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.

¶ ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು.