ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು.
TSK
TSK · 1 ಸಮುವೇಲನು 7:13
Treasury of Scripture Knowledge references in ಕನ್ನಡ IRV.
ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.
¶ ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು.
ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು.
¶ ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.
¶ ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.