TSK

TSK · 1 ತಿಮೊಥೆಯನಿಗೆ 2:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.

ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.

ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.

ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.

¶ ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.

¶ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.

ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.

¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.