‹ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು”› ಎಂದು ಹೇಳಿದನು.
TSK
TSK · 1 ತಿಮೊಥೆಯನಿಗೆ 3:13
Treasury of Scripture Knowledge references in ಕನ್ನಡ IRV.
‹ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.›
ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.
ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.
ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.
¶ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.
ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.