ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
TSK
TSK · 1 ತಿಮೊಥೆಯನಿಗೆ 4:3
Treasury of Scripture Knowledge references in ಕನ್ನಡ IRV.
¶ ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.
ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,
ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, ‹“ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.›
ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.
ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
“ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?
¶ ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,
¶ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.