TSK

TSK · 2 ಪೂರ್ವಕಾಲವೃತ್ತಾ 1:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.

ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.

ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.

ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.

ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.