TSK

TSK · 2 ಪೂರ್ವಕಾಲವೃತ್ತಾ 1:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.

¶ ಆಗ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು ಹೇಳಿದ್ದೇನೆಂದರೆ, “ದೇವರೇ, ಯೆಹೋವನೇ, ನನ್ನಂಥವನಿಗೆ ಈ ಪದವಿಯನ್ನು ಅನುಗ್ರಹಿಸಿದ್ದಿ, ನಾನೆಷ್ಟರವನು? ನನ್ನ ಮನೆ ಎಷ್ಟರದು?

ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.

ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.

ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?