TSK

TSK · 2 ಪೂರ್ವಕಾಲವೃತ್ತಾ 10:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.

ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ” ಎಂದು ಹೇಳಿದನು.

ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ” ಎಂದು ತಿಳಿಸಿದರು.

ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.