TSK

TSK · 2 ಪೂರ್ವಕಾಲವೃತ್ತಾ 11:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.

ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.

ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ

ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.

ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು.