¶ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ
TSK
TSK · 2 ಪೂರ್ವಕಾಲವೃತ್ತಾ 12:1
Treasury of Scripture Knowledge references in ಕನ್ನಡ IRV.
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.
ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.
ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.
“ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.
ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.
ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.