2 ಅರಸುಗಳು 18:5
TSK
ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.
TSK
Treasury of Scripture Knowledge references in ಕನ್ನಡ IRV.
ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.
ಆಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು.
ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
¶ ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.