TSK

TSK · 2 ಪೂರ್ವಕಾಲವೃತ್ತಾ 13:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.

¶ ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.

ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.

ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.

ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.