TSK

TSK · 2 ಪೂರ್ವಕಾಲವೃತ್ತಾ 14:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.

ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.

ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.

ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.